ಹುಬ್ಬಳ್ಳಿ : ಶಾಲೆಗಳಿಗೆ ದಸರಾ ರಜೆಯನ್ನು 15 ದಿನಕ್ಕೆ ಸೀಮಿತಗೊಳಿಸಿರುವ ಸರ್ಕಾರದ ನಡೆಗೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶಿಕ್ಷಣ ಸಚಿವರು, ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ ಬಸವರಾಜ ಹೊರಟ್ಟಿ, ಈ ಮುಂಚೆ ದಸರಾಗೆ ಒಂದು ತಿಂಗಳು ರಜೆ ಕೊಡಲಾಗುತ್ತಿತ್ತು. ಹಾಗೇ ಎರಡು ತಿಂಗಳ ಬೇಸಿಗೆ ರಜೆ ನೀಡಲಾಗುತ್ತಿತ್ತು. ಆದ್ರೆ ಈ ಬಾರಿ ಕೇವಲ 15 ದಿನ ರಜೆ ನೀಡಿರೋದು ಸರಿಯಲ್ಲ. ದಸರಾ ಮತ್ತು ದೀಪಾವಳಿ ಹಬ್ಬ ಎರಡೂ ಒಂದೇ ತಿಂಗಳಲ್ಲಿ ಬಂದಿವೆ. ಹೀಗಾಗಿ ಈ ಎರಡೂ ಹಬ್ಬ ಮುಗಿಯೋವರೆಗೆ ರಜೆ ಕೊಡಬೇಕಾಗಿತ್ತು.
ಕೇವಲ 15 ದಿನಗಳ ರಜೆಯಿಂದ ಮಕ್ಕಳಿಗೆ ತೊಂದರೆಯಾಗುತ್ತದೆ. ಮಕ್ಕಳಿಗೆ ಶಾಲೆಯ ಪಾಠಗಳ ಜೊತೆಗೆ ಮನೆಯಲ್ಲಿನ ವಾತಾವರಣವು ಅಷ್ಟೇ ಮುಖ್ಯ. ಮಕ್ಕಳು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ. ಹೀಗಾಗಿ ಒಂದು ತಿಂಗಳಿಗೆ ರಜೆ ವಿಸ್ತರಣೆ ಮಾಡಬೇಕೆಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.










