ಕರ್ನಾಟಕದ 15 ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ…

240
firstsuddi

ನವದೆಹಲಿ : ಕರ್ನಾಟಕದ 15 ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, 15 ಮಂದಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ಪ್ರತಿವಾದವನ್ನು ಆಲಿಸಿದ ನ್ಯಾ. ಎನ್. ವಿ. ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಅನರ್ಹ ಶಾಸಕರ ಅರ್ಜಿ ವಿಚಾರಣೆ ಸಂಪೂರ್ಣವಾಗಿ ಮುಗಿಯುವವರೆಗೂ ಉಪಚುನಾವಣೆ ನಡೆಸುವಂತಿಲ್ಲ ಎಂದು ಆದೇಶ ನೀಡಿ ವಿಚಾರಣೆಯನ್ನು ಅಕ್ಟೋಬರ್ 22 ಕ್ಕೆ ಮುಂದೂಡಿದೆ.