15 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳ ಬಿಜೆಪಿ ಟಿಕೆಟ್ ಅನರ್ಹರ ಪಾಲು…

199
firstsuddi

ಬೆಂಗಳೂರು : ಅನರ್ಹ ಶಾಸಕರು ಬಿಜೆಪಿ ಸೇರ್ಪಡೆಗೊಂಡ ಬೆನ್ನಲ್ಲೇ ಡಿಸೆಂಬರ್ 5ರಂದು ನಡೆಯುವ ಉಪಚುನಾವಣೆಗೆ 15 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳ ಶಾಸಕರಿಗೆ ಬಿಜೆಪಿ ಟಿಕೆಟ್ ಹಂಚಿಕೆಯಾಗಿದೆ. ಶಿವಾಜಿನಗರ ಮತ್ತು ರಾಣೆಬೆನ್ನೂರು ಕ್ಷೇತ್ರಕ್ಕೆ ಟಿಕೆಟ್ ಹಂಚಿಕೆಯಾಗಿಲ್ಲ.

ರಮೇಶ್ ಜಾರಕಿಹೊಳಿ(ಗೋಕಾಕ್) ಎಂಟಿಬಿ ನಾಗರಾಜ್(ಹೊಸಕೋಟೆ), ಎಚ್. ವಿಶ್ವನಾಥ್(ಹುಣಸೂರು), ಮಹೇಶ್ ಕುಮಟಳ್ಳಿ(ಅಥಣಿ) ಶ್ರೀಮಂತ ಪಾಟೀಲ್(ಕಾಗವಾಡ) ಶಿವರಾಂ ಹೆಬ್ಬಾರ್(ಯಲ್ಲಾಪುರ) ಬಿಸಿ ಪಾಟೀಲ್(ಹಿರೇಕೆರೂರು) ಆನಂದ್ ಸಿಂಗ್ (ವಿಜಯನಗರ), ಡಾ.ಸುಧಾಕರ್(ಚಿಕ್ಕಬಳ್ಳಾಪುರ) ಬೈರತಿ ಬಸವರಾಜ್(ಕೆಆರ್ ಪುರ) ಎಸ್ಟಿ ಸೋಮಶೇಖರ್(ಯಶವಂತಪುರ), ಗೋಪಾಲಯ್ಯ(ಮಹಾಲಕ್ಷ್ಮಿ ಲೇಔಟ್), ನಾರಾಯಣ ಗೌಡ(ಕೆ.ಆರ್.ಪೇಟೆ) ಅವರಿಗೆ ಟಿಕೆಟ್ ನೀಡಲಾಗಿದೆ.