15 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಗೌಪ್ಯವಾಗಿ ವಿವಾಹ ಮಾಡಿಕೊಂಡಿದ್ದ ಸರ್ಕಾರಿ ಶಿಕ್ಷಕ ಅಮಾನತು…

98
firstsuddi

ಬೀದರ್: 15 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಗೌಪ್ಯವಾಗಿ ವಿವಾಹ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಜಿಲ್ಲೆಯ ಭಾಲ್ಕಿ ತಾಲೂಕಿನ ಹಲಸಿ ತೂಗಾಂವ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಂದೀಪ್ ಕುಮಾರ್ ಅಮಾನತುಗೊಂಡವರು. ಈತನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಡಿಡಿಪಿಐ ಸಲೀಂ ಪಾಷಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಆತನಿಗೆ ಮದುವೆಯಾಗಿ ಮಗುವಿದ್ದರೂ ಸಹಿತ ಹಲಸಿ ತೂಗಾಂವ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ 15 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಮದುವೆಯಾಗಿದ್ದ. ಈ ಕುರಿತು ಶಿಶು ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಬಾಳುವಾಲೆ ಶಿಕ್ಷಕನ ವಿರುದ್ಧ ಸೂಕ್ತ ಕ್ರಮಕ್ಕಾಗಿ ಮೇಹಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಸಂದೀಪ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.