16ರ ಬಾಲಕಿ ಮೇಲೆ ಎಂಟು ಕಾಮುಕರಿಂದ 12 ಗಂಟೆಗಳ ಕಾಲ ನಿರಂತರ ಸಾಮೂಹಿಕ ಅತ್ಯಾಚಾರ…

66
firstsuddi

ಮುಂಬೈ: 16 ವರ್ಷದ ಬಾಲಕಿಯ ಮೇಲೆ 8 ಕಾಮುಕರು ನಿರಂತರ 12 ಗಂಟೆಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ನಡೆದಿದೆ.

ಬಾಲಕಿಗೆ ವ್ಯಕ್ತಿಯೊಬ್ಬ ಆಮಿಷವೊಡ್ಡಿ ಖಾಲಿ ಬಂಗಲೆಗೆ ಕರೆದೊಯ್ದಿದ್ದಾನೆ. ಬಂಗಲೆಯಲ್ಲಿ ಮೊದಲು ಅತ್ಯಾಚಾರ ನಡೆಸಿ ಬಳಿಕ ಸಮುದ್ರ ತೀರಕ್ಕೆ ಕರೆದೊಯ್ದು ಮತ್ತೆ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಘಟನೆಗೆ ಸಂಬಂಧಿಸಿ ಬಾಲಕಿಯು ಪೊಲೀಸರಿಗೆ ದೂರು ನೀಡಿದ್ದು, ದೂರಿನಲ್ಲಿ ಡಿ. 16 ರಂದು ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 11 ಗಂಟೆಯವರೆಗೂ ಅತ್ಯಾಚಾರವೆಸಗಿರುವ ಬಗ್ಗೆ ತಿಳಿಸಿದ್ದಾಳೆ.

ಘಟನೆ ಸಂಬಂಧ ಎಂಟು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376(ಡಿ), 366(ಎ), 341, 342, 323 ಮತ್ತು ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.