16 ವರ್ಷದ ಹುಡುಗಿಯ ಮೇಲೆ ಗ್ಯಾಂಗ್‍ರೇಪ್- ಮೂವರು ಆರೋಪಿಗಳ ಬಂಧನ..

63
firstsuddi

ನವದೆಹಲಿ: ದೆಹಲಿಯ ಶಹಬಾದ್ ಡೈರಿ ಪ್ರದೇಶದಲ್ಲಿ 16 ವರ್ಷದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಜೂನ್ 27ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ತನ್ನ ಗೆಳೆಯನ ಜೊತೆ ರಾತ್ರಿ ಸಮಯದಲ್ಲಿ ಪಾರ್ಕ್‍ನಲ್ಲಿ ಕುಳಿತಿದ್ದಳು. ಹೀಗೆ ಕುಳಿತುಕೊಂಡು ಮಾತನಾಡುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ಮೂವರು ಎಂಟ್ರಿ ಕೊಡುತ್ತಾರೆ. ಅಲ್ಲದೆ ಕುಳಿತಿರುವ ಇಬ್ಬರ ಜೊತೆ ಮಾತಿಗಿಳಿಯುತ್ತಾರೆ. ಮಾತು ಮಾತಿಗೆ ಬೆಳೆಯುತ್ತಾ ಮೂವರು, ಹುಡುಗಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ.

ತಮ್ಮ ಕಾಮತೃಷೆ ತೀರಿಸಿಕೊಂಡ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಇತ್ತ ಘಟನೆ ಸಂಬಂಧ ದೆಹಲಿ ಪೊಲೀಸರಿಗೆ ಮಾಹಿತಿ ರವಾನೆಯಾಗಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹುಡುಗಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸದ್ಯ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.