ರಾಜ್ಯದಲ್ಲಿ ಇಂದು ಒಂದೇ ದಿನ 16 ಕೊರೊನಾ ಪ್ರಕರಣ ದೃಢ-144ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ…

126
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ ಹೊಸದಾಗಿ 16 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 144ಕ್ಕೆ ಏರಿಕೆಯಾಗಿದೆ. 144 ಸೋಂಕಿತರ ಪೈಕಿ ನಾಲ್ವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಸರ್ಕಾರದ ಕೊರೊನಾ ವಕ್ತಾರ ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.