ರಾಜ್ಯದಲ್ಲಿ ಇಂದು ಹೊಸದಾಗಿ 16 ಜನರಿಗೆ ಕೊರೊನಾ ಸೋಂಕು-ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆ…

122
firstsuddi

ಬೆಂಗಳೂರು : ರಾಜ್ಯ ಸರ್ಕಾರ ಇಂದು ಲಾಕ್‍ಡೌನ್ ಭಾಗಶಃ ಸಡಿಲಗೊಳಿಸಿರುವ ಬೆನ್ನಲ್ಲೇ ರಾಜ್ಯದಲ್ಲಿ ಇಂದು ಒಂದೇ ದಿನ ಹೊಸದಾಗಿ 16 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಬಿಹಾರ ಮೂಲದ ಓರ್ವ ಕಾರ್ಮಿಕನಿಂದ 9 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಮಂಡ್ಯ-2, ವಿಜಯಪುರ-2, ಧಾರವಾಡ-2 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ ಈವರೆಗೆ 145 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ಈವರೆಗೆ 100 ಕೊರೊನಾ ಪ್ರಕರಣಗಳು ದಾಖಲಾಗಿವೆ.