17ರ ಬಾಲಕಿ ಮೇಲೆ ಅಪ್ರಾಪ್ತ ಸೇರಿ 6 ಮಂದಿಯಿಂದ ಅತ್ಯಾಚಾರ…

69
firstsuddi

ಮುಂಬೈ : 17 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸೇರಿದಂತೆ ಆರು ಮಂದಿ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿಗಳಲ್ಲಿ ಒಬ್ಬಾತ ವಿದ್ಯಾರ್ಥಿನಿಯನ್ನು ಜಮೀನೊಂದಕ್ಕೆ ಕರೆದುಕೊಂಡು ಹೋಗಿದ್ದಾನೆ. ನಂತರ ಅಲ್ಲಿ 6 ಜನರು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳನ್ನೆಲ್ಲರನ್ನು ಬಂಧಿಸಲಾಗಿದೆ. ಈ ಆರು ಆರೋಪಿಗಳ ಪೈಕಿ ಐವರು 19 ರಿಂದ 33 ವರ್ಷ ಒಳಗಿನವರಾಗಿದ್ದಾರೆ. ಮತ್ತೊಬ್ಬ ಅಪ್ರಾಪ್ತನಾಗಿದ್ದಾನೆ.

ಐವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ಆಗಸ್ಟ್ 17 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಅಪ್ರಾಪ್ತ ಆರೋಪಿಯನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.