ನವದೆಹಲಿ: 17 ವರ್ಷಕ್ಕಿಂತ ಮೇಲ್ಪಟ್ಟ ಯುವಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು ಎಂದು ಭಾರತದ ಚುನಾವಣಾ ಆಯೋಗ ತಿಳಿಸಿದೆ.
ಈ ಬಗ್ಗೆ ಮುಖ್ಯ ಚುನಾವಣಾ ಅಧಿಕಾರಿ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನೂಪ್ ಚಂದ್ರ ಪಾಂಡೆ ನೇತೃತ್ವದ ಚುನಾವಣಾ ಸಂಸ್ಥೆಯು ಎಲ್ಲ ರಾಜ್ಯಗಳ ಸಿಇಒ, ಇಆರ್ ಒ. ಎಇಆರ್ ಒಗಳಿಗೆ ನಿರ್ದೇಶನ ನೀಡಿದ್ದು, ಯುವಜನರು ತಮ್ಮ ಮುಂಗಡ ಅರ್ಜಿಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲು ಹಾಗೂ ಮಾಹಿತಿ ನೀಡಲು ಸೂಚಿಸಿದೆ.
17 ವರ್ಷಕ್ಕಿಂತ ಮೇಲ್ಪಟ್ಟ ಯುವಕರು ಈಗ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಲು ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು ಮತ್ತು ಒಂದು ವರ್ಷದ ಜನವರಿ 1 ರಂದು 18 ವರ್ಷ ವಯಸ್ಸನ್ನು ತಲುಪುವ ಪೂರ್ವ-ಅವಶ್ಯಕ ಮಾನದಂಡವನ್ನು ಕಾಯಬೇಕಿಲ್ಲ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.










