ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 178 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,711ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನಲ್ಲಿ ಇಂದು ರಾಯಚೂರು ಜಿಲ್ಲೆ-62, ಯಾದಗಿರಿ-60, ಬೆಂಗಳೂರು-9, ಉಡುಪಿ-15, ಕಲಬುರಗಿ-15, ಚಿಕ್ಕಬಳ್ಳಾಪುರ-4, ದಾವಣಗೆರೆ-4, ಮೈಸೂರು-2, ಮಂಡ್ಯ-2, ಶಿವಮೊಗ್ಗ ಚಿತ್ರದುರ್ಗ, ಧಾರವಾಡ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ಒಬ್ಬರಲ್ಲಿ ಸೋಂಕು ತಗುಲಿರುವುದು ದೃಢವಾಗಿದೆ. ರಾಜ್ಯದಲ್ಲಿ 2,711 ಮಂದಿ ಸೋಂಕಿತರ ಪೈಕಿ, ಈವರೆಗೆ 47 ಮಂದಿ ಸೋಂಕಿಗೆ ಬಲಿಯಾಗಿದ್ದು, 869 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ










