18 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರದ ಆದೇಶ…

70
firstsuddi

ಬೆಂಗಳೂರು : ತಾತ್ಕಾಲಿಕವಾಗಿ 18 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಕೊರೊನಾ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭೌತಿಕ ತರಗತಿಗಳನ್ನು ಆರಂಭಿಸಲಾಗಿದ್ದು, ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ಸೇವೆ ಪಡೆದುಕೊಳ್ಳಲಾಗುತ್ತದೆ. 2022ರ ಮಾರ್ಚ್ ತಿಂಗಳವರೆಗೆ ಅಥವಾ ಪ್ರಸಕ್ತ ಸಾಲಿನ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಅತಿಥಿ ಶಿಕ್ಷಕರ ಸೇವೆ ಪಡೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.