ದೇಶದಲ್ಲಿ 18,222 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,04,31,639ಕ್ಕೆ ಏರಿಕೆ…

120
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,222 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,04,31,639ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 228 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,50,798ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,04,31,639ಕ್ಕೆ ಮಂದಿ ಸೋಂಕಿತರ ಪೈಕಿ ಈವರೆಗೆ 1,00,56,651ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 2,24,190ಕ್ಕೆ ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.