ದೇಶದಲ್ಲಿ 19,078ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,03,05,788ಕ್ಕೆ ಏರಿಕೆ…

107
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 19,078ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,03,05,788ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 224 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,49,218ಕ್ಕೆ ಏರಿಕೆಯಾಗಿದೆ. ದೇಶದಲಿ1,03,05,788ಮಂದಿ ಸೋಂಕಿತರ ಪೈಕಿ ಈವರೆಗೆ 99,06,387ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 2,50,183 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.