ದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ಬಳಿಕ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ದೋಷಿ ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.ಡಿಸೆಂಬರ್ 31ರ ಒಳಗೆ ಶರಣಾಗುವಂತೆ ಸಜ್ಜನ್ ಕುಮಾರ್ ಅವರಿಗೆ ಕೋರ್ಟ್ ಆದೇಶಿಸಿದೆ ಹಾಗೂ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿ ಕಂಟೋನ್ ಮೆಂಟ್ ಏರಿಯಾದಲ್ಲಿ ಗಲಭೆ ನಡೆದಿತ್ತು. ಈ ವೇಳೆ ಐವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.










