2ನೇ ಬಾರಿಗೆ ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ ಸ್ವೀಕಾರ…

62
firstsuddi

ಡೆಹ್ರಾಡೂನ್ : ಎರಡನೇ ಬಾರಿಗೆ ಉತ್ತರಾಖಂಡದ ಮುಖ್ಯಮಂತ್ರಿ ಆಗಿ ಪುಷ್ಕರ್ ಸಿಂಗ್ ಧಾಮಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪುಷ್ಕರ್ ಸಿಂಗ್ ಧಾಮಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಆದರೆ ಹೈಕಮಾಂಡ್ ಮತ್ತೆ ಅವರಿಗೆ ಸಿಎಂ ಪಟ್ಟವನ್ನು ಕಟ್ಟಿದೆ. ಮುಖ್ಯಮಂತ್ರಿ ಧಾಮಿ ಅವರೊಂದಿಗೆ 8 ಕ್ಯಾಬಿನೆಟ್ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಸತ್ಪಾಲ್ ಮಹಾರಾಜ್, ಪ್ರೇಮ್ ಚಂದ್ ಅಗರ್ವಾಲ್, ಗಣೇಶ್ ಜೋಷಿ, ಧನ್ ಸಿಂಗ್ ರಾವತ್, ಸುಬೋಧ್ ಉನಿಯಾಲ್, ರೇಖಾ ಆರ್ಯ, ಚಂದನ್ ರಾಮ್ ದಾಸ್, ಸೌರಭ್ ಬಹುಗುಣ ಅವರೂ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಡೆಹ್ರಾಡೂನ್ ಪರೇಡ್ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಯೋಗಿ ಆದಿತ್ಯನಾಥ್, ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ಇತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.