2 ಲಾರಿ ಮತ್ತು ಕ್ರೂಸರ್ ನಡುವೆ ಸರಣಿ ಅಪಘಾತ- 7 ಮಂದಿ ಸ್ಥಳದಲ್ಲೇ ಸಾವು…

57
firstsuddi

ವಿಜಯನಗರ: 2 ಲಾರಿ ಮತ್ತು ಕ್ರೂಸರ್ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮ 7 ಜನ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದಲ್ಲಿ ನಡೆದಿದೆ.

ಅಪಘಾತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಲಾರಿ ಆಕ್ಸಲ್ ಕಟ್ ಆಗಿ ಭೀಕರ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಹೊಸಪೇಟೆ, ಮರಿಯಮ್ಮನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸದ್ಯ 7 ಶವಗಳನ್ನು ಹೊರತೆಗೆದು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಮೃತರೆಲ್ಲರೂ ಹೊಸಪೇಟೆ ಮೂಲದವರು. ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.