2.0 ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಬಾರದೆಂದು ವಾಟಾಳ್‌ ನಾಗರಾಜ್  ಪ್ರತಿಭಟನೆ…

487

ಬೆಂಗಳೂರು:  ರಜನಿಕಾಂತ್ ಅಭಿನಯದ 2.0 ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಬಾರದೆಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್  ಅವರು  ತೀವ್ರ ವಿರೋಧ  ವ್ಯಕ್ತಪಡಿಸುತ್ತಿದ್ದು, ನಗರದ ಊರ್ವಶಿ ಚಿತ್ರಮಂದಿರದ ಎದುರು ವಾಟಾಳ್ ನಾಗರಾಜ್  ಅವರು  ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಚಿತ್ರ ಬಿಡುಗಡೆಗೆ ಅವಕಾಶ ನೀಡಿದರೆ ಕನ್ನಡ ಚಿತ್ರಗಳಿಗೆ ತೊಂದರೆಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.