2-3 ದಿನಗಳಲ್ಲಿ ವಿಶ್ವನಾಥ್ ಅವರು ರಾಜೀನಾಮೆಯನ್ನು ವಾಪಸ್ ಪಡೆಯುತ್ತಾರೆ : ಪ್ರಜ್ವಲ್ ರೇವಣ್ಣ…

210
firstsuddi

ಹಾಸನ : ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಅವರ ರಾಜೀನಾಮೆ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಇನ್ನೂ 2-3 ದಿನಗಳಲ್ಲಿ ವಿಶ್ವನಾಥ್ ಅವರು ರಾಜೀನಾಮೆಯನ್ನು ವಾಪಸ್ ಪಡೆಯುತ್ತಾರೆ. ಹೆಚ್.ಡಿ. ದೇವೇಗೌಡ ಹಾಗೂ ಹೆಚ್.ಡಿ ಕುಮಾರಸ್ವಾಮಿ ಅವರು ವಿಶ್ವನಾಥ್ ಅವರ ಮನವೊಲಿಸಿದ್ದಾರೆ. ಕೆಲವು ವಿಷಯಕ್ಕೆ ಅವರು ಬೇಸರ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ನಡೆದ ಜೆಡಿಎಲ್‍ಪಿ ಸಭೆಯಲ್ಲಿ ವಿಶ್ವನಾಥ್ ಅವರು ಭಾಗಿಯಾಗಿದ್ದು, ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಕಟ್ಟುತ್ತೇವೆ ಎಂದು ಹೇಳಿದ್ದಾರೆ.