2-3 ದಿನದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ : ಬಸವರಾಜ ಬೊಮ್ಮಾಯಿ.

57
firstsuddi

ನವದೆಹಲಿ : ಮುಖ್ಯಮಂತ್ರಿ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಅಮಿತ್ ಶಾ ಭೇಟಿಯ ನಂತರ ಮಧ್ಯಮಗಳ ಜೊತೆ ಮಾತನಾಡಿದ ಬೊಮ್ಮಾಯಿ ಅವರು, ರಾಜ್ಯದ ರಾಜಕೀಯ ವಿದ್ಯಮಾನಗಳು, ಸ್ಥಿತಿಗತಿಗಳು ಮತ್ತು ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲಾಗಿದೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಜೊತೆ ಮಾತನಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಎರಡು ಮೂರು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುವುದಾಗಿ ಅಮಿತ್ ಶಾ ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು, ರಾಜಕೀಯ ಪಕ್ಷವಾಗಿ ಎಲ್ಲಾ ತೀರ್ಮಾನ ಮಾಡಬೇಕಾಗಿದೆ. ಮುಂದಿನ ಒಂದು ವಾರ ಬಹಳ ಮುಖ್ಯವಾಗಿದೆ. ಯಾಕೆಂದರೆ ಸ್ಥಳೀಯ ಚುನಾವಣೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ರಾಜ್ಯದ ರಾಜಕೀಯ ಸ್ಥಿತಿಗತಿ ಆಧಾರ ಬಗ್ಗೆ ಬದಲಾವಣೆ ಆಗಬಹುದು. ಬರುವ ಮೂರು ನಾಲ್ಕು ದಿನಗಳಲ್ಲಿ ನಿರ್ಧಾರವಾಗಲಿದೆ ಎಂದ ತಿಳಿಸಿದರು.