20ವರ್ಷದ ವಿದ್ಯಾರ್ಥಿನಿಯೊಂದಿಗೆ 58ವರ್ಷದ ಶಿಕ್ಷಕನ ಸರಸ ಸಲ್ಲಾಪ- ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್…

1804
firstsuddi

ಮೈಸೂರು : ಸರ್ಕಾರಿ ಶಾಲೆಯ ಶಿಕ್ಷಕನೋರ್ವ ತನ್ನ ಹಳೆಯ ವಿದ್ಯಾರ್ಥಿನಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಗಳಲ್ಲಿ ವೈರಲ್ ಆಗಿವೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಸಿದ್ದರಾಜು(58) ಅದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದ ಹಳೆಯ ವಿದ್ಯಾರ್ಥಿನಿ 20 ವರ್ಷದ ಯುವತಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ ಆರೋಪ ಕೇಳಿ ಬಂದಿದೆ. ಸುಮಾರು 25 ವರ್ಷಗಳಿಂದ ಅದೇ ಶಾಲೆಯಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿರುವ ಸಿದ್ದರಾಜು ಅವರಿಗೆ ಈಗಾಗಲೇ ಎರಡು ಮದುವೆಯಾಗಿದ್ದು, ಪಾರ್ಶ್ವವಾಯು ರೋಗದಿಂದ ತನ್ನ ಎರಡು ಕಾಲುಗಳ ಸ್ವಾಧೀನವನ್ನು ಕಳೆದುಕೊಂಡಿದ್ದಾರೆ. ಹೀಗಿದ್ದರೂ 20 ವರ್ಷದ ಯುವತಿಯೊಂದಿಗೆ ಅನೈತಿಕ ಸಂಬಂಧವನ್ನು ಹೊಂದಿದ್ದು, ಯುವತಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಫೋಟೋಗಳು ವೈರಲ್ ಆಗುತ್ತಿದ್ದಂತೆ ಗ್ರಾಮದಿಂದ ಶಿಕ್ಷಕ ಪರಾರಿಯಾಗಿದ್ದು, ಕಾಮುಕ ಶಿಕ್ಷಕ ಸಿದ್ದರಾಜು ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ರಾಂಪುರ ಗ್ರಾಮದ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.