20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ – ಏಳು ಮಂದಿ ಸಾವು…

70
firstsuddi

ಮುಂಬೈ : ನಗರದ ಟಾರ್ಡಿಯೊದಲ್ಲಿನ ನಾನಾ ಚೌಕ್ ನಲ್ಲಿರುವ 20 ಅಂತಸ್ತಿನ ಕಟ್ಟಡದಲ್ಲಿ ಅವಘಡ ಸಂಭವಿಸಿದೆ.

ಇಂದು ಬೆಳಗ್ಗೆ ಕಮಲಾ ಕಟ್ಟಡದ 3ನೇ ಹಂತದಲ್ಲಿರುವ 18 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಸ್ತುತ ಲಭ್ಯವಾಗಿರುವ ಮಾಹಿತಿ ಪ್ರಕಾರ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರನ್ನು ಐಸಿಯುಗೆ ದಾಖಲಿಸಲಾಗಿದ್ದು, ಇನ್ನುಳಿದ 12 ಮಂದಿಯನ್ನು ಸಾಮಾನ್ಯ ವಾರ್ಡ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗ್ಗೆ 7.30ರ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ 13 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಗಾಯಾಳುಗಳನ್ನು ಸಮೀಪದ ಭಾಟಿಯಾ ಮತ್ತು ನಾಯರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಹೇಗೆ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.