200 ಕೋಟಿ ಸುಲಿಗೆ ಪ್ರಕರಣ ; ಜಾಕ್ವೆಲಿನ್ ಫರ್ನಾಂಡಿಸ್ ವಿದೇಶ ಪ್ರಯಾಣಕ್ಕೆ ತಡೆ…

73
firstsuddi

ಮುಂಬೈ : ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಹೆಸರು ಕೇಳಿಬಂದಿರುವ ಕಾರಣ ಅವರಿಗೆ ದೇಶ ತೊರೆಯದಂತೆ ವಲಸೆ ಅಧಿಕಾರಿಗಳು ನಿನ್ನೆ ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ.

ಕಾರ್ಯಕ್ರಮವೊಂದಕ್ಕೆ ದುಬೈಗೆ ತೆರಳುತ್ತಿದ್ದ ವೇಳೆ ಜಾಕ್ವೆಲಿನ್ ಅವರನ್ನು ತಡೆದ ಅಧಿಕಾರಿಗಳು 200 ಕೋಟಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾಕ್ವೆಲಿನ್ ವಿರುದ್ಧ ಇಡಿ ಹೊಸ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ.

ಸುಕೇಶ್ ಚಂದ್ರಶೇಖರ್, ಉದ್ಯಮಿಗಳು, ರಾಜಕಾರಣಿಗಳು ಮತ್ತು ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕಿ ನೂರಾರು ಕೋಟಿ ಹಣ ಸುಲಿಗೆ ಮಾಡುತ್ತಿದ್ದ. ಅಲ್ಲದೇ ತಿಹಾರ್ ಜೈಲಿನಲ್ಲಿಯೇ ಇದ್ದುಕೊಂಡು ಫೋರ್ಟಿಸ್ ಹೆಲ್ತ್ಕೇರ್ ಪ್ರಮೋಟರ್ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಅವರಿಗೆ ವಂಚಿಸಿ, 200 ಕೋಟಿ ಸುಲಿಗೆ ಹಣ ಸುಲಿಗೆ ಮಾಡಿರುವ ಆರೋಪ ಕೂಡ ಈತನ ಮೇಲಿದೆ. ಪ್ರಸ್ತುತ ಆತನನ್ನು ರೋಹಿಣಿ ಜೈಲಿನಲ್ಲಿ ಇರಿಸಲಾಗಿದೆ ಎಂದು ಇಡಿ ಹೇಳಿದೆ.

ಇತ್ತೀಚೆಗಷ್ಟೇ ಜಾಕ್ವೆಲಿನ್ ಫರ್ನಾಂಡಿಸ್, ಸುಕೇಶ್ ಚಂದ್ರಶೇಖರ್ ಜೊತೆಗಿರುವ ರೋಮ್ಯಾಂಟಿಕ್ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಹಲವಾರು ಅನುಮಾನಗಳಿಗೆ ಕಾರಣವಾಯಿತು. ಜಾಕ್ವೆಲಿನ್ ಫರ್ನಾಂಡಿಸ್ ಕೂಡಾ ಈ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಈಗಾಗಲೇ ಅವರು ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆ ಎದುರಿಸಿದ್ದಾರೆ.