200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಜಾಮೀನು ಅರ್ಜಿ ವಿಚಾರಣೆ ನವೆಂಬರ್ 15ಕ್ಕೆ ಮುಂದೂಡಲಾಗಿದ್ದು, ಸದ್ಯ ನಟಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ಸ್ನೇಹಿತ ಸುಕೇಶ್ ಚಂದ್ರಶೇಖರ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊನ್ನೆಯಿಂದ ಜಾಕ್ವೆಲಿನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದೆ. ಹಾಗಾಗಿ ಮೊನ್ನೆಯಷ್ಟೇ ಜಾಕ್ವೆಲಿನ್ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಗೆ ಖುದ್ದಾಗಿ ಹಾಜರಾಗಿದ್ದರು. ಇದೀಗ ನವೆಂಬರ್ 15ಕ್ಕೆ ಮುಂದೂಡಲಾಗಿದೆ.
ಸುಕೇಶ್ ಅವರಿಂದ ದುಬಾರಿ ಉಡುಗೊರೆಗಳನ್ನು ಜಾಕ್ವೆಲಿನ್ ಪಡೆದುಕೊಂಡಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಈ ಎಲ್ಲ ಆರೋಪಗಳನ್ನೂ ಜಾಕ್ವೆಲಿನ್ ತಳ್ಳಿ ಹಾಕಿದ್ದಾರೆ. ಸುಕೇಶ್ ಜೊತೆಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಅಲ್ಲದೇ, ಬಹುತೇಕ ವಸ್ತುಗಳನ್ನು ತಾವೇ ತಮ್ಮ ಸ್ವಂತ ಹಣದಲ್ಲೇ ಖರೀದಿಸಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಜಾಮೀನಿಗೆ ಅವರು ಅರ್ಜಿ ಸಲ್ಲಿಸಿದ್ದರು.










