ದೇಶದಲ್ಲಿ 20,021 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,02,07,871ಕ್ಕೆ ಏರಿಕೆ…

111
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 20,021 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,02,07,871ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 279 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,47,901ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,02,07,871 ಮಂದಿ ಸೋಂಕಿತರ ಪೈಕಿ ಈವರೆಗೆ 97,82,669ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 2,77,301 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.