2016ರ ಪ್ರಕರಣ : ಶಾಸಕ ಜಿಗ್ನೇಶ್ ಮೇವಾನಿಗೆ 6 ತಿಂಗಳು ಜೈಲು…

64
firstsuddi

ಅಹಮದಾಬಾದ್ : 2016ರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇತರ 19 ಮಂದಿಗೆ ನಿನ್ನೆ ಅಹಮದಾಬಾದ್ ನ್ಯಾಯಾಲಯ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಗುಜರಾತ್ ವಿಶ್ವವಿದ್ಯಾಲಯದ ಕಾನೂನು ವಿಭಾಗಕ್ಕೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಭವನ ಎಂದು ಹೆಸರಿಡಬೇಕು ಎಂದು ಒತ್ತಾಯಿಸಿ ಜಿಗ್ನೇಶ್ ಮೇವಾನಿ ಇತರ ದಲಿತ ಹಕ್ಕುಗಳ ಗುಂಪುಗಳೊಂದಿಗೆ ಸೇರಿ 2016ರಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ 19 ಮಂದಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ.

ಅಂದಹಾಗೆ, ಜಿಗ್ನೇಶ್ ಮೇವಾನಿ ಪ್ರಸ್ತುತ ಅಸ್ಸಾಂ ನ್ಯಾಯಾಲಯದಿಂದ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಮಾಡಿದ್ದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.