ಬೆಂಗಳೂರು : 2019-20ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟವಾಗಿದ್ದು, ಇಂಜಿನಿಯರ್ ವಿಭಾಗದ ಜಫಿನ್ ಬಿಜು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಫಲಿತಾಂಶ ಪಟ್ಟಿಯನ್ನು ಉನ್ನತ ಶಿಕ್ಷಣ ಸಚಿನ ಜಿ.ಟಿ. ದೇವೇಗೌಡ ಅವರು ಬಿಡುಗಡೆ ಮಾಡಿದ್ದು, ಏಪ್ರಿಲ್ 29 ಹಾಗೂ 30 ರಂದು ವೈದ್ಯಕೀಯ, ದಂತವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ಗಳಿಗೆ ಸಿಇಟಿ ಪರೀಕ್ಷೆ ನಡೆದಿತ್ತು. 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಮದ್ಯಾಹ್ನ 1 ಗಂಟೆಗೆ ಅಧಿಕೃತ http://kea.kar.nic.in, http://cet.kar.nic.in ಹಾಗೂ http://kar.results.nic.in ವೆಬ್‍ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.










