2023ರಲ್ಲಿ ನೂರಕ್ಕೆ ನೂರು ಬಿಜೆಪಿ ಅಧಿಕಾರಕ್ಕೆ ಬರುತ್ತೆ : ಬೊಮ್ಮಾಯಿ.

17
firstsuddi

ಬೆಂಗಳೂರು : 2023ರ ಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಡಾ.ಬಿ ಆರ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಜಯ ಎಂಬ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜನರು ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಲಿದ್ದಾರೆ. ಜನರು ಸುಳ್ಳು ಆರೋಪಗಳು ಹಾಗೂ ರಾಜಕೀಯ ಆರೋಪಗಳಿಗೆ ಬೆಲೆ ಕೊಡುವುದಿಲ್ಲ. ಎರಡು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಇಡೀ ಭಾರತ, ವಿಶ್ವ ಬೆಂಬಲ ಕೊಡುತ್ತಿದೆ. ಹೀಗಾಗಿ ಗುಜರಾತ್ ನಲ್ಲಿ 7ನೇ ಬಾರಿ ಗೆಲುವು ಸಾಧಿಸುತ್ತಿದ್ದೇವೆ ಎಂದರು. ಈ ಚುನಾವಣೆ ಫಲಿತಾಂಶ ಮುಂಬರುವ ಕರ್ನಾಟಕ ಚುನಾವಣೆ ಮೇಲೆ ಪರಿಣಾಮ ಬೀರಲಿದೆ. 2023ರ ಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಮಹಾರಾಷ್ಟ್ರ ಗಡಿ ತಗಾದೆ ವಿಚಾರವಾಗಿ ಪ್ರತಿಕ್ರಿಯಿಸಿ, ಸುಪ್ರೀಂ ಕೋರ್ಟ್ ನಲ್ಲಿ ಕೇಸ್ ಇದೆ. ಗೆಲ್ಲುವ ವಿಶ್ವಾಸವಿದೆ. ಚುನಾವಣೆ ದೃಷ್ಟಿಯಲ್ಲಿ ವಿವಾದ ಎಬ್ಬಿಸುವುದಿಲ್ಲ. ಜನರ ರಕ್ಷಣೆಗೆ ನಾವು ಬದ್ಧವಾಗಿದ್ದೇವೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆ ಮಾಡಲು ಸರ್ಕಾರ ಸಿದ್ಧವಾಗಿದೆ ಎಂದರು.