2023ರ ಒಳಗೆ ಸಿದ್ದರಾಮಯ್ಯರನ್ನ ಕಾಂಗ್ರೆಸ್‌ನಿಂದ ಹೊರಹಾಕ್ತಾರೆ : ಮುನಿರತ್ನ ಭವಿಷ್ಯ…

60
firstsuddi

ಬೆಂಗಳೂರು : 2023ರ ಒಳಗೆ ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಕಾಂಗ್ರೆಸ್‌ನಿಂದ ಹೊರಹಾಕ್ತಾರೆ ಎಂದು ಸಚಿವ ಮುನಿರತ್ನ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, 1994 ರಲ್ಲಿ ರಾಮಕೃಷ್ಣ ಹೆಗಡೆಯವರು ಇದ್ದ ಜಾಗದಲ್ಲಿ ಇಂದು ಸಿದ್ದರಾಮಯ್ಯ ಇದ್ದಾರೆ. ನೋಡ್ತಾ ಇರಿ, ಸಿದ್ದರಾಮಯ್ಯನನ್ನು 2023ಕ್ಕೆ ಪಾರ್ಟಿಯಿಂದಲೇ ಸಸ್ಪೆಂಡ್ ಮಾಡಿಸ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಮುನಿರತ್ನ, ಸುಮಲತಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ವಿಚಾರ ಕುರಿತು ವರಿಷ್ಠರು ನಿರ್ಧಾರ ಮಾಡ್ತಾರೆ ಎಂದರು.