2023ರ ವಿಧಾನಸಭಾ ಚುನಾವಣೆ ನನ್ನ ಕೊನೆ ಚುನಾವಣೆ : ಹೆಚ್.ಡಿ.ಕುಮಾರಸ್ವಾಮಿ.

48
firstsuddi

ರಾಮನಗರ : 2023ರ ವಿಧಾನಸಭಾ ಚುನಾವಣೆ ನನ್ನ ಕೊನೆಯ ಚುನಾವಣೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ನಡೆದ ಬಮೂಲ್ ಉತ್ಸವದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರದ ಜನರು ಯಾವತ್ತೂ ನನ್ನನ್ನು ಕೈಬಿಡಲಿಲ್ಲ. ಚನ್ನಪಟ್ಟಣ ಬಿಟ್ಟು ನಾನು ಎಲ್ಲೂ ಹೋಗುವ ಪ್ರಶ್ನೆಯೇ ಇಲ್ಲ. ಹಾಗಾಗಿ ಕಾರ್ಯಕರ್ತರು ಒಗ್ಗಟ್ಟಾಗಿ. ನಿಮ್ಮಲ್ಲೊಬ್ಬ ಲೀಡರ್ ಹುಟ್ಟಿಕೊಳ್ಳಬೇಕು. ಭಿನ್ನಾಭಿಪ್ರಾಯ ಮರೆತು ಎಲ್ಲರೂ ಒಗ್ಗಟ್ಟಾಗಿರಿ. 2028ಕ್ಕೆ ಓರ್ವ ಅಭ್ಯರ್ಥಿಯನ್ನು ನೀವೇ ತಯಾರಿಸಿ ಎಂದರು.

ಮಂಡ್ಯದ ಕಾರ್ಯಕರ್ತರು ಕೆ.ಆರ್.ಪೇಟೆಯಲ್ಲಿ ಬಂದು ಚುನಾವಣೆಗೆ ನಿಲ್ಲಿ ಎಂದು ಮನವಿ ಮಾಡಿದರು. ಚನ್ನಪಟ್ಟಣದಲ್ಲಿ ನಿಮ್ಮನ್ನು ಸೋಲಿಸಲು ಮಸಲತ್ತು ಮಾಡಿದ್ದಾರೆ ಎಂದರು. ಆದರೆ ನಾನು ಇದಕ್ಕೆ ಹೆದರುವುದಿಲ್ಲ ಎಂದರು.

ಚನ್ನಪಟ್ಟಣ ಕ್ಷೇತ್ರದಲ್ಲಿ 20 ವರ್ಷ ಶಾಸಕರಾಗಿ ಏನು ಮಾಡಿದ್ದೀರಿ ಎಂದು ಯೋಗೇಶ್ವರ್ ಗೆ ಪ್ರಶ್ನೆ ಮಾಡಿದರು. ಕೊರೊನಾ ಕಾಲದಲ್ಲಿ ಈ ಮಹಾನ್ ಭಾವ ಎಲ್ಲಿದ್ದ. ಕನಕಪುರದಲ್ಲಿ ನಮ್ಮ ಸೂಕ್ತ ನಾಯಕ ಇದ್ದಿದ್ದರೆ ಅಲ್ಲೂ ಗೆಲ್ಲುತ್ತಿದ್ದೆವು. ಯೋಗೇಶ್ವರ್ ಕೂಡ ಸಿಎಂ ಆಗುತ್ತೇನೆ ಎಂದು ಹೊರಟಿದ್ದಾರೆ ಎಂದು ಟಾಂಗ್ ಕೊಟ್ಟರು.