ಬೆಳಗಾವಿ : 2024ರ ಲೋಕಸಭೆ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದು, ಈ ಮೂಲಕ ಮತ್ತೊಮ್ಮೆ ಕರ್ನಾಟಕ ಇಬ್ಬಾಗದ ಮಾತೆತ್ತಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, 2024ರ ನಂತರ ದೇಶದಲ್ಲಿ 50 ಹೊಸ ರಾಜ್ಯಗಳು ಉದಯಿಸಲಿವೆ. ಆಗ ಕರ್ನಾಟಕವೂ ಎರಡು ಭಾಗವಾಗಲಿದೆ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ. ರಾಜಧಾನಿ ಬೆಂಗಳೂರಲ್ಲೀಗ ಟ್ರಾಫಿಕ್ ಸಮಸ್ಯೆ ಸಹ ಹೆಚ್ಚಾಗಿದೆ. ಧಾರವಾಡದಲ್ಲಿ ಹೈಕೋರ್ಟ್, ಬೆಳಗಾವಿಯಲ್ಲಿ ಸುವರ್ಣಸೌಧ ಇದೆ. ಪ್ರತ್ಯೇಕ ರಾಜ್ಯಕ್ಕೆ ಬೇಕಾದ ಮೂಲಸೌಕರ್ಯ ನಮ್ಮಲ್ಲಿವೆ ಎಂದಿದ್ದಾರೆ.










