2024ರ ವರ್ಷದ ಮಹಿಳಾ ಏಕದಿನ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿಗೆ ಸ್ಮೃತಿ ಮಂಧಾನ ಆಯ್ಕೆ.

60

 ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನಗೆ 2024ರ ವರ್ಷದ ಮಹಿಳಾ ಏಕದಿನ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿಗೆ ಐಸಿಸಿ ಆಯ್ಕೆ ಮಾಡಿದೆ. ಕಳೆದ ವರ್ಷ ಏಕದಿನ ಕ್ರಿಕೆಟ್‍ನಲ್ಲಿ 13 ಇನ್ನಿಂಗ್ಸ್‍ಗಳನ್ನು ಆಡಿದ್ದ ಮಂಧಾನ ನಾಲ್ಕು ಭರ್ಜರಿ ಶತಕಗಳ ಸಹಿತ ಒಟ್ಟು 747 ರನ್ ಕಲೆಹಾಕಿದ್ದರು. ಈ ಮೂಲಕ 2024ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎಡಗೈ ಮಹಿಳಾ ಕ್ರಿಕೆಟ್ ಆಟಗಾರರ ಪೈಕಿ ಸ್ಮೃತಿ ಮಂಧಾನ ಅತಿ ಹೆಚ್ಚು ರನ್ ಗಳಿಸಿದ್ದಾರೆ. ಮಂಧಾನ ಬಳಿಕ ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡದ ಲಾರಾ ವೊಲ್ವಾರ್ಡ್ 697 ರನ್ ಹಾಗೂ ಟ್ಯಾಮಿ ಬ್ಯೂಮಾಂಟ್ 554 ರನ್ ಮತ್ತು ಹೇಲಿ ಮ್ಯಾಥ್ಯೂಸ್ 469 ರನ್ ಕಲೆ ಹಾಕಿದ್ದಾರೆ. 2024ರ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾಗುವ ಮೂಲಕ ಸ್ಮೃತಿ ಮಂಧಾನ ತಮ್ಮ ವೃತ್ತಿ ಬದುಕಿನಲ್ಲಿ 4ನೇ ಐಸಿಸಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ.