ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 20,550ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,02,44,853ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 286 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,48,439ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,02,44,853ಮಂದಿ ಸೋಂಕಿತರ ಪೈಕಿ ಈವರೆಗೆ 9,83,4141ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 2,62,272ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










