215 ಕೋಟಿ ರೂ. ವಂಚನೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆರೋಪಿ.

67
firstsuddi

ಬರೋಬ್ಬರಿ 215 ಕೋಟಿ ರೂಪಾಯಿ ಹಣ ವಸೂಲಿ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿಯನ್ನಾಗಿ ಇಡಿ ಅಧಿಕಾರಿಗಳು ಇಂದು ದೆಹಲಿ ಇಡಿ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತಿದ್ದಾರೆ. ವಂಚಕ ಸುಕೇಶ್ ಚಂದ್ರಶೇಖರ್ ಸ್ನೇಹ ಮಾಡಿದ ತಪ್ಪಿಗೆ ಬಾಲಿವುಡ್ ನಟಿಗೆ ಇದೀಗ ಕೋರ್ಟ್ ಕಟಕಟೆಯಲ್ಲಿ ನಿಲ್ಲಬೇಕಾದ ಸ್ಥಿತಿ ಎದುರಾಗಿದೆ.

ಬೆಂಗಳೂರು ಮೂಲದ ಸುಖೇಶ್ ಚಂದ್ರಶೇಖರ್ ಬರೋಬ್ಬರಿ 215 ಕೋಟಿ ರೂಪಾಯಿ ಹಣವನ್ನು ಜೈಲಿನಲ್ಲಿರುವ ಉದ್ಯಮಿ ಖೈದಿಯನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿ ಉದ್ಯಮಿ ಪತ್ನಿಯನ್ನು ನಂಬಿಸಿ ವಸೂಲಿ ಮಾಡಿದ್ದ. ಆನಂತರ ಉದ್ಯಮಿ ಪತ್ನಿಗೆ ಇದು ಮೋಸ ಎಂದು ಗೊತ್ತಾಗಿ ಪ್ರಕರಣ ದಾಖಲಿಸಿದ್ದರು. ಈ 215 ಕೋಟಿ ರೂಪಾಯಿ ಹಣದಲ್ಲಿ ಹತ್ತು ಕೋಟಿ ರೂಪಾಯಿ ಹಣವನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್ ಗೆ ಗಿಫ್ಟ್ ನೀಡಿದ್ದ.

ಈಗ ಜಾರಿ ನಿರ್ದೇಶನಾಲಯ ಜಾಕ್ವೆಲಿನ್ ಫರ್ನಾಂಡೀಸ್ ರನ್ನು ಕೂಡ ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತಿದೆ. ಜಾಕ್ವೆಲಿನ್ ಫರ್ನಾಂಡೀಸ್ ಗೆ ಸುಕೇಶ್ ಚಂದ್ರಶೇಖರ್ ವಂಚನೆ ಮಾಡಿ ಹಣ ಗಳಿಸಿದ್ದಾನೆ ಎಂಬುದು ಗೊತ್ತಿತ್ತು ಎಂದು ಇಡಿ ಹೇಳಿದೆ. ಇದರಿಂದ ಸುಕೇಶ್ ಚಂದ್ರಶೇಖರ್ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಕೂಡ ಆರೋಪಿಯನ್ನಾಗಿ ಮಾಡಲು ಇಡಿ ನಿರ್ಧರಿಸಿದೆ.