ದೇಶದಲ್ಲಿ 21,821ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,02,66,674ಕ್ಕೆ ಏರಿಕೆ…

112
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 21,821ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,02,66,674ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 299 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,48,738ಕ್ಕೆ ಏರಿಕೆಯಾಗಿದೆ. ದೇಶದಲಿ1,02,66,674ಮಂದಿ ಸೋಂಕಿತರ ಪೈಕಿ ಈವರೆಗೆ 98,60,280ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 2,57,656 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.