22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…

100
firstsuddi

ಮಂಗಳೂರು : ಕಳೆದ 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳದ ಬಜಗೋಳಿಯ ಡಿಡಿಂಬಿಲ ಗುಡ್ಡೆ ನಿವಾಸಿ ಝಕಾರಿಯಾ ಬಂಧಿತ ಆರೋಪಿ.

ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2000ನೇ ಇಸವಿಯಲ್ಲಿ ದಾಖಲಾದ ಪ್ರಕರಣದಲ್ಲಿ ಕಳೆದ 22 ವರ್ಷಗಳಿಂದ ಈ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿ ಸ್ಥಳದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ನಿನ್ನೆ ಆತನನ್ನು ಬಂಧಿಸಿ ಬಳಿಕ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

20 ವರ್ಷಗಳಿಂದ ತಲೆಮರೆಸಿಕೊಂಡಿರುವ ಆರೋಪಿತನನ್ನು ಪತ್ತೆ ಮಾಡಿದ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಘವೇಂದ್ರ ಬೈಂದೂರು ಮತ್ತು ಠಾಣಾ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಓಂದಾಸ್ ಹಾಗು ಪೊಲೀಸ್ ಕಾನ್ ಸ್ಟೇಬಲ್ ಸಂಪತ್ ರವರಿಗೆ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.