ರಾಜಸ್ಥಾನ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ನದಿಗೆ ಬಿದ್ದು 24 ಮಂದಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬೂಂದೀ ಜಿಲ್ಲೆಯ ಕೋಟಾ-ದೌಸಾ ಹೆದ್ದಾರಿಯಲ್ಲಿ ನಡೆದಿದೆ. ಮದುವೆ ದಿಬ್ಬಣದ ಖಾಸಗಿ ಬಸ್ ಕೋಟಾದಿಂದ ಸವಾಯಿ ಮಾಧೋಪುರಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಪರಿಣಾಮ 24ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಕೂಡಲೃ ಸ್ಥಳೀಯರು ನದಿಗೆ ಜಿಗಿದು ಹಲವರನ್ನು ರಕ್ಷಿಸಲು ಪ್ರಯತ್ನಿಸಿದ್ದು, ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ರಕ್ಷಣಾ ತಂಡ ನಾಲ್ವರನ್ನು ಅಪಾಯದಿಂದ ಪಾರು ಮಾಡಿದ್ದು, ಘಟನೆಗೆ ಚಾಲಕ ನಿದ್ದೆ ಮಂಪರಿನಲ್ಲಿ ಬಸ್ ಚಲಾಯಿಸಿದ್ದೇ ಕಾರಣ ಎನ್ನಲಾಗಿದೆ.










