2,500 ಕೋಟಿ ರೂ. ವೆಚ್ಚದಲ್ಲಿ 500 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಸಂಪುಟ ಅಸ್ತು.

15

ಬೆಂಗಳೂರು: ನಾಲ್ಕು ವರ್ಷಗಳಲ್ಲಿ 2,500 ಕೋಟಿ ರೂಪಾಯಿ ವೆಚ್ಚದಲ್ಲಿ 500 ಸರ್ಕಾರಿ ಶಾಲೆಗಳನ್ನು ಪಬ್ಲಿಕ್ ಶಾಲೆಗಳಂತೆ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕಾಗಿ ರಾಜ್ಯ ಸರ್ಕಾರವು ಏಷ್ಯನ್ ಡೆವಲಪ್‍ಮೆಂಟ್ ಬ್ಯಾಂಕ್‍ನಿಂದ 2,000 ಕೋಟಿ ರೂಪಾಯಿ ಸಾಲ ಪಡೆಯಲಿದ್ದರೆ ಸರ್ಕಾರದ ಖಜಾನೆಯಿಂದ 500 ಕೋಟಿ ರೂಪಾಯಿಗಳನ್ನು ನೀಡಲಿದೆ. ಈ ಯೋಜನೆಯನ್ನು ಜುಲೈ 2025ರಿಂದ ಜೂನ್ 2029ರವರೆಗೆ ಮುಗಿಸಲಾಗುತ್ತದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ರಾಜ್ಯದ 204 ತಾಲೂಕುಗಳಲ್ಲಿ 308 ಕರ್ನಾಟಕ ಪಬ್ಲಿಕ್ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.