25ರ ಯುವತಿಯನ್ನು ಮದ್ವೆಯಾಗಿದ್ದ ಶಂಕರಣ್ಣ ಆತ್ಮಹತ್ಯೆ!

75
firstsuddi

ತುಮಕೂರು : ಕಳೆದ ವರ್ಷ 45 ವರ್ಷದ ವ್ಯಕ್ತಿ ಜೊತೆಗೆ 25ರ ಯುವತಿ ಮದುವೆಯಾಗಿದ್ದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಆದರೀಗ ಈ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಂಕರಣ್ಣ(45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. 2021ರ ಅಕ್ಟೋಬರ್ ನಲ್ಲಿ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ದೇವಾಲಯವೊಂದರಲ್ಲಿ ಶಂಕರಣ್ಣ ಮತ್ತು ಮೇಘನಾ ಅವರ ಮದುವೆ ನಡೆದಿತ್ತು. ಆದರೆ ಮದುವೆಯಾದ ಐದು ತಿಂಗಳಿನಲ್ಲಿಯೇ ಶಂಕರಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳಿಂದ ಇಬ್ಬರ ನಡುವೆ ಜಗಳ ನಡೆದಿತ್ತು. ಇದರಿಂದ ಬೇಸತ್ತು ನಿನ್ನೆ ಮನೆ ಬಿಟ್ಟು ಹೋಗಿದ್ದ ಶಂಕರಣ್ಣನವರು, ಕುಣಿಗಲ್ ತಾಲೂಕಿನ ಅಕ್ಕಿಮರಿಪಾಳ್ಯದಲ್ಲಿದ್ದ ತಮ್ಮ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.