ಮಾಜಿ ವಿಶ್ವ ಸುಂದರಿ ಸ್ಪರ್ಧಿ ಶೆರಿಕಾ ಡಿ ಅರ್ಮಾಸ್ (26) ನಿಧನರಾಗಿದ್ದಾರೆ. ಗರ್ಭ ಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುವುದಾಗಿ ವರದಿಯಾಗಿದೆ.
ಕಳೆದ 2 ವರ್ಷಗಳಿಂದ ಶೆರಿಕಾ ಅವರು ಕ್ಯಾನರ್ ನಿಂದ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದರು. ಹಲವು ಬಾರಿ ಚಿಕಿತ್ಸೆಗೆ ಒಳಗಾದರೂ ಯಾವುದೇ ಪ್ರಯೋಜನವಾಗಿಲ್ಲ.
ಶೆರಿಕಾ ಅವರು 2015ರಲ್ಲಿ ತನ್ನ ದೇಶ ಉರುಗ್ವೆಯನ್ನು ಪ್ರತಿನಿಧಿಸಿದ್ದರು. ಮಿಸ್ ಯೂನಿವರ್ಸ್ ಉರುಗ್ವೆ 2022, ಕಾರ್ಲಾ ರೊಮೆರೊ ಅವರು ನನ್ನ ಜೀವನದಲ್ಲಿ ನಾನು ಭೇಟಿಯಾದ ಅತ್ಯಂತ ಸುಂದರ ಮಹಿಳೆಯರಲ್ಲಿ ಒಬ್ಬರು ಎಂದು ಶೋಕ ವ್ಯಕ್ತಪಡಿಸಿದ್ದಾರೆ.
ಸದ್ಯ ಶೆರಿಕಾ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು ಹಾಗೂ ಸ್ನೇಹಿತರು ಕಂಬನಿ ಮಿಡಿದಿದ್ದಾರೆ.










