ಜಾರ್ಖಂಡ್ : ಜಾರ್ಖಂಡ್ ನ ಪಶ್ಚಿಮ ಸಿಂಗ್ ಭೂಮ್ ಜಿಲ್ಲೆಯಲ್ಲಿ 26 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ಮೇಲೆ ಸುಮಾರು 10 ಮಂದಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಈಕೆ ತನ್ನ ಪ್ರಿಯಕರನ ಜೊತೆ ಬೈಕ್ ರೈಡ್ ಗೆ ಹೋಗುವಾಗ ಈ ಘಟನೆ ನಡೆದಿದೆ.
ಎಂಟರಿಂದ ಹತ್ತು ಜನರ ಪುರುಷರ ಗುಂಪು ಅವರಿಬ್ಬರನ್ನು ತಡೆದು, ಗೆಳೆಯನಿಗೆ ಥಳಿಸಿದೆ. ಬಳಿಕ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಂತರ ಅತ್ಯಾಚಾರವೆಸಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆ ಪ್ರಸಿದ್ಧ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆಕೆಯ ಮೇಲೆ ಅತ್ಯಾಚಾರ ಎಸಗಿದ ಬಳಿಕ ಆಕೆಯನ್ನು ಸ್ಥಳದಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಆಕೆಯ ಪರ್ಸ್ ಮತ್ತು ಮೊಬೈಲ್ ಫೋನ್ ಅನ್ನು ತೆಗೆದುಕೊಂಡು ಹೋಗಿದ್ದಾರೆ. ಮಹಿಳೆ ಹೇಗೋ ಮನೆಗೆ ತಲುಪಿ, ಘಟನೆಯ ಬಗ್ಗೆ ತನ್ನ ಮನೆಯವರಿಗೆ ತಿಳಿಸಿದ್ದಾರೆ. ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆಗೆ ವೈದ್ಯಕೀಯ ತಪಾಸಣೆ ಮಾಡಲಾಗಿದೆ.
ಮುಫಸಿಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ.










