3 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವ ದಂಪತಿ ಆತ್ಮಹತ್ಯೆ…

67
firstsuddi

ಬೆಂಗಳೂರು ಗ್ರಾಮಾಂತರ: ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ.

ಕೆರೆಕೋಡಿ ನಿವಾಸಿ ರಮೇಶ್(26), ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜರುಗಹಳ್ಳಿ ಗ್ರಾಮದ ಸಹನಾ (22) ಆತ್ಮಹತ್ಯೆಗೆ ಶರಣಾದ ನವ ದಂಪತಿ.

ದೇವನಹಳ್ಳಿಯ ರೆಡ್ಡಿ ಎಲೆಕ್ಟ್ರಾನಿಕ್ಸ್ ನಲ್ಲಿ ವ್ಯವಸ್ಥಾಪಕರಾಗಿ ಆಗಿ ಕೆಲಸ ಮಾಡುತ್ತಿದ್ದ ರಮೇಶ್, ಸಹನಾ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು. ಮನೆಯವರ ವಿರೋಧದ ನಡುವೆಯೇ ಪ್ರೀತಿಸಿ 3 ತಿಂಗಳ ಹಿಂದಷ್ಟೇ ಮದುವೆಯಾಗಿ ಬಾಡಿಗೆ ಮನೆಯಲ್ಲಿ ಸಂಸಾರ ನಡೆಸುತ್ತಿದ್ದರು.

ಎರಡು ದಿನದಿಂದೆ ಬಿಜ್ಜವಾರ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದ ದಂಪತಿ, ಆದರೆ, ರಾತ್ರಿ ಮನೆಯಿಂದ ಹೊರಟವರು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ವಿಜಯಪುರ ಠಾಣಾ ಪೊಲೀಸರು ಭೇಟಿ ನೀಡಿ ಸ್ಥಳೀಯರ ಸಹಾಯದಿಂದ ನೀರಿನಲ್ಲಿದ್ದ ಮೃತದೇಹಗಳನ್ನು ಹೊರತೆಗೆದು ತನಿಖೆ ನಡೆಸಿದ್ದಾರೆ.