ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಸೈನಿಕರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯ ಜಿಯಾನಾಪೊರಾ ಎಂಬ ಅರಣ್ಯ ಪ್ರದೇಶದಲ್ಲಿ ಕೆಲವು ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಯನ್ನು ತಿಳಿದ ಕಾಶ್ಮೀರಾ ಪೊಲೀಸರು, 55 ಆರ್ಆರ್ ರಾಷ್ಟ್ರೀಯ ರೈಫಲ್ಸ್ ಹಾಗೂ ಸಿ.ಆರ್.ಪಿ.ಎಫ್ ಯೋಧರು ಕಳೆದ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದು, ಈ ವೇಳೆ ಉಗ್ರರು ಯೋಧರನ್ನು ಗುರಿಯಾಗಿಸಿಕೊಂಡು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಬಳಿಕ ಯೋಧರು ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಪರಿವರ್ತಿಸಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಇನ್ನು ಓರ್ವ ಉಗ್ರ ಅಡಗಿ ಕುಳಿತಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.










