3 ವರ್ಷದ ಮಗು ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ 30ರ ಕಾಮುಕ!

87
firstsuddi

ಹುಬ್ಬಳ್ಳಿ : 30 ವರ್ಷದ ಕಾಮುಕನೊಬ್ಬ3 ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಗರದ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾಮುಕ ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅಲ್ಲದೇ ಮಗುವಿನ ಕಾಲಿಗೆ ಕಚ್ಚಿ ಗಾಯಗೊಳಿಸಿ ವಿಕೃತಿ ಮೆರೆದಿದ್ದಾನೆ. ಈ ಬಗ್ಗೆ ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಕಾಮುಕನನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.