ದೇಶದಲ್ಲಿ 30,005 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 98,26,775 ಕ್ಕೆ ಏರಿಕೆ…

100
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 30,005 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98,26,775 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 442 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,42,628ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 98,26,775 ಮಂದಿ ಸೋಂಕಿತರ ಪೈಕಿ ಈವರೆಗೆ 93,24,328 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 3,59,819 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.