31 ಗೋವುಗಳನ್ನು ದತ್ತು ಪಡೆಯಲು ಮುಂದಾದ ಕಿಚ್ಚ ಸುದೀಪ್.

19
firstsuddi

ನಟ ಕಿಚ್ಚ ಸುದೀಪ್ ಅವರನ್ನು ಕರ್ನಾಟಕ ಸರ್ಕಾರ ‘ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ’ಯನ್ನಾಗಿ ನೇಮಕ ಮಾಡಿದೆ. ಇಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ನೇಮಕಾತಿ ಪತ್ರವನ್ನು ವಿತರಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ಸುದೀಪ್ ಅವರ ಮನೆಯಲ್ಲಿ ಗೋಪೂಜೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಸುದೀಪ್ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಿಂದ 31 ಗೋವುಗಳನ್ನು ದತ್ತು ಪಡೆಯಲು ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಇಲಾಖೆ ಕಾರ್ಯದರ್ಶಿ ಡಾ,ಸಲ್ಮಾ ಕೆ. ಫಾಹೀಮ್, ಆಯುಕ್ತೆ ಎಸ್. ಅಶ್ವಥಿ, ಅಪರ ನಿರ್ದೇಶಕ ಡಾ. ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.