ದೇಶದಲ್ಲಿ 31,522 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 97,67,372ಕ್ಕೆ ಏರಿಕೆ…

103
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 31,522 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 97,67,372ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 412 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,41,772ಕ್ಕೆ ಏರಿಕೆಯಾಗಿದೆ. ದೇಶದಲಿ 97,67,372 ಮಂದಿ ಸೋಂಕಿತರ ಪೈಕಿ ಈವರೆಗೆ 92,53,306 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 3,72,294 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.