ಸರ್ಕಾರಿ ಬಸ್ ಕಣಿವೆಗೆ ಉರುಳಿ ಬಿದ್ದು 32 ಮಂದಿ ಪ್ರಯಾಣಿಕರು ದುರ್ಮರಣ…

282
firstsuddi

ತೆಲಂಗಾಣ:  ಜಗ್ತಿಯಲ್ ಜಿಲ್ಲೆಯ ಕೊಂಡಗಟ್ಟು ಸಮೀಪ ಸರ್ಕಾರಿ ಬಸ್ಸೊಂದು ಕಮರಿಗೆ ಉರುಳಿದ ಪರಿಣಾಮ 32 ಮಂದಿ ಸಾವನ್ನಪ್ಪಿದ್ದು, ಘಟನೆಯಲ್ಲಿ 28 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಅಪಘಾತಕ್ಕೀಡಾದ ಬಸ್ ನಲ್ಲಿ ಸುಮಾರು 60ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಜಗ್ತಿಯಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.