ದೇಶದಲ್ಲಿ ಒಂದೇ ದಿನ 32,981 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 96,77,203 ಕ್ಕೆ ಏರಿಕೆ…

112
firstsuddi

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 32,981 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 96,77,203 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 391 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,40,573 ಕ್ಕೆ ಏರಿಕೆಯಾಗಿದೆ. ದೇಶದಲಿ 96,77,203 ಮಂದಿ ಸೋಂಕಿತರ ಪೈಕಿ ಈವರೆಗೆ 91,39,901 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 3,96,729 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.