33 ವಾರಗಳ ಗರ್ಭಪಾತಕ್ಕೆ ದೆಹಲಿ ಹೈಕೋರ್ಟ್ ಅನುಮತಿ…

27
firstsuddi

ನವದೆಹಲಿ : 33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ.

33 ವಾರಗಳ ಗರ್ಭಿಣಿಯಾಗಿರುವ 26 ವರ್ಷದ ಮಹಿಳೆಯೊಬ್ಬರು ಗರ್ಭಪಾತಕ್ಕೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರತಿಭಾ ಸಿಂಗ್, ಎನ್‌ಎನ್‌ಜೆಪಿ ಆಸ್ಪತ್ರೆ ವೈದ್ಯರ ಸಲಹೆ ಕೇಳಿದ್ದರು. ಆದರೆ ವರದಿಯಲ್ಲಿ ವೈದ್ಯರು ಗರ್ಭಪಾತವನ್ನು ತಿರಸ್ಕರಿಸಿದ್ದರು.

ಬಳಿಕ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಮತ್ತು ಸ್ತ್ರೀರೋಗತಜ್ಞರಿಂದ ವರದಿ ಕೇಳಿದರು. ನರಶಸ್ತ್ರಚಿಕಿತ್ಸಕರು ಮಗುವಿಗೆ ಏನಾದರೂ ನ್ಯೂನತೆ ಇರುವ ಸಾಧ್ಯತೆಯಿದೆ, ಮಗುವಿನ `ಜೀವನದ ಗುಣಮಟ್ಟ’ವನ್ನು ಊಹಿಸಲು ಸಾಧ್ಯವಿಲ್ಲ. ಆದರೆ ಮಗುವಿನ ಜನನದ ಬಳಿಕ ಸುಮಾರು 10 ವಾರಗಳ ನಂತರ ಕೆಲವು ಸಮಸ್ಯೆಗಳಿಗೆ ಶಸ್ತ್ರಚಿಕಿತ್ಸೆ ನಡೆಸಬಹುದು ಎಂದು ವರದಿ ನೀಡಿದ್ದರು.

ವರದಿ ಆಧರಿಸಿ ತೀರ್ಪು ನೀಡಿದ ನ್ಯಾ. ಪ್ರತಿಭಾ ಸಿಂಗ್, ಭಾರತದ ಕಾನೂನಿನಲ್ಲಿ ಮಹಿಳೆ ತಾನು ಗರ್ಭಾವಸ್ಥೆಯಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುದು ಅಂತಿಮವಾಗಿ ಅವರೇ ನಿರ್ಧರಿಸಬೇಕು. ತಾಯಿಯ ಆಯ್ಕೆ ಮೇಲೆ ಈ ಆದೇಶ ನೀಡಲಾಗುತ್ತಿದ್ದು, ಅರ್ಜಿದಾರ ಮಹಿಳೆ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಬಹುದು ಎಂದು ತಿಳಿಸಿದರು.